ಬಿಲ್ಕಿಸ್ ಅತ್ಯಾಚಾರಿಗಳ ಬಿಡುಗಡೆ: ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

233

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ ಸಂಬಂಧ ಸುಪ್ರೀಂ ಕೋರ್ಟ್ ಗೆ ಹಲವರು ಅರ್ಜಿ ಸಲ್ಲಿಸಿದ್ದರು. 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆದರೆ, ಅವರನ್ನು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದ್ದು, ಇದೀಗ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಹಾಗೂ ಅದನ್ನು ರದ್ದುಗೊಳಿಸಬೇಕೆಂದು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ್ ಅವರ ಪೀಠ, ಈ ಕುರಿತು ಸ್ಪಷ್ಟನೆ ಕೇಳಿ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿದೆ.




Leave a Reply

Your email address will not be published. Required fields are marked *

error: Content is protected !!