ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ನ ಕೆಲ ನಾಯಕರು ಪಕ್ಷ ತೊರೆದು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾದರು. ತುಮಕೂರಿನ ಮಾಜಿ ಬಿಜೆಪಿ ಶಾಸಕ ಕಿರಣ್ ಕುಮಾರ್ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಯಾದರು.
ಇವರ ಜೊತೆಗೆ ತುಮಕೂರು ಗ್ರಾಮೀಣ ಮಾಜಿ ಶಾಸಕ ಹೆಚ್.ನಿಂಗಪ್ಪ, ಮಾಜಿ ಜಿ.ಪಂ ಸದಸ್ಯ ಸುಬ್ರಹ್ಮಣ್ಯ ಸಹ ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.