ತಾಲೂಕಾಡಳಿತ ಕಚೇರಿಯಲ್ಲೇ ರಾಜೀನಾಮೆ.. ಉಮೇದುವಾರಿಕೆ..

655

ಸಿಂದಗಿ: ಪಟ್ಟಣದ ಪುರಸಭೆ ಚುಣಾವಣೆಗೆ ಸಂಬಂಧಿಸಿದಂತೆ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಅದರಂತೆ ತಹಶೀಲ್ದಾರ್ ಕಚೇರಿಯಲ್ಲಿ ಅಭ್ಯರ್ಥಿಗಳು ಹಾಗೂ ಬೆಂಬಲಿಗರ ಜೈಕಾರ ಜೋರಾಗಿತ್ತು. ಇದರ ನಡುವೆ 13ನೇ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶೈಲಜಾ ಸ್ಥಾವರಮಠ ಅವರ ನಡೆ ಚರ್ಚೆಗೆ ಗ್ರಾಸವಾಗಿದೆ.

ಆಗಿದ್ದು ಏನಪ್ಪ ಅಂದ್ರೆ, ಜೆಡಿಎಸ್ ನಿಂದ ಬಂಡಾಯವೆದ್ದು ಮರಳಿ ಬಿಜೆಪಿ ಸೇರ್ಪಡೆಯಾಗುವ ಮೂಲಕ ಮಾತೃಪಕ್ಷ ಸೇರಿಕೊಂಡ ಶೈಲಜಾ ಸ್ಥಾವರಮಠ ಅವರು, ತಹಶೀಲ್ದಾರ್ ಕಚೇರಿ ಆವರಣದಲ್ಲಿಯೇ ಜೆಡಿಎಸ್ ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.! ಜೆಡಿಎಸ್ ತಾಲೂಕಾಧ್ಯಕ್ಷ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಮೀಡಿಯಾದವರು ತಾಲೂಕಾಧ್ಯಕ್ಷರನ್ನ ಕೇಳಿದ್ರೆ ರಾಜೀನಾಮೆ ಸಲ್ಲಿಸಿದ್ದಾರೆ ಅಂತಾ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಕೊಡಬೇಕಾದ ರಾಜೀನಾಮೆ ಪತ್ರವನ್ನ ತಹಶೀಲ್ದಾರ್ ಕಚೇರಿಯಲ್ಲಿ ಕೊಟ್ಟಿರುವುದ್ಯಾಕೆ ಅನ್ನೋ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಹಾಗೂ ಈ ಹಿಂದೆ ಸ್ಪರ್ಧಿಸಿ ಅಲ್ಪ ಅಂತರದಲ್ಲಿ ಸೋಲು ಅನುಭವಿಸಿದ್ದ ಶೈಲಜಾ ಸ್ಥಾವರಮಠ, ಈ ಬಾರಿ ಮತ್ತೆ ಜೆಡಿಎಸ್ ನಿಂದ ಕಣಕ್ಕೆ ಇಳಿಯಲು ಭರ್ಜರಿ ಸಿದ್ಧತೆ ನಡೆಸಿದ್ರು. 13ನೇ ವಾರ್ಡ್ ನ ಜೆಡಿಎಸ್ ಪ್ರಬಲ ಆಕಾಂಕ್ಷಿಯೆಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿತ್ತು. ಆದ್ರೆ, ಶಾಸಕ ಎಂ.ಸಿ ಮನಗೂಳಿ ಅವರ ಪುತ್ರ ಶಾಂತವೀರ ಮನಗೂಳಿ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಜೆಡಿಎಸ್ ನಿಂದ ಬಂಡಾಯವೆದ್ದು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಇನ್ನು ವಿಚಿತ್ರ ಅಂದ್ರೆ, ಅವರ ಫೇಸ್ ಬುಕ್ ಫ್ರೊಫೈಲ್ ನಲ್ಲಿ ಜೆಡಿಎಸ್ ಪ್ರಬಲ ಆಕಾಂಕ್ಷಿ ಅನ್ನೋ ಫೋಟೋ ಇನ್ನೂ ಹಾಗೇ ಇದೆ.





Leave a Reply

Your email address will not be published. Required fields are marked *

error: Content is protected !!