ವಸತಿ ಶಾಲೆ ಪ್ರಕರಣ ಅಧ್ಯಯನಕ್ಕೆ ಬಿಜೆಪಿ ಸಮಿತಿ: ವಿಜಯೇಂದ್ರ

140

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರಿನ ಹತ್ತಿರದ ಯಲುವಹಳ್ಳಿ ಮುರಾರ್ಜಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿ ಇಳಿಸಿದ ಪ್ರಕರಣ ಸಂಬಂಧ ಈಗಾಗ್ಲೇ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ. ಇದೀಗ ಈ ಘಟನೆ ಬಗ್ಗೆ ವಸ್ತುಸ್ಥಿತಿ ಅಧ್ಯಯನಕ್ಕೆ ಸಮಿತಿಯೊಂದು ಸಿದ್ಧಪಡಿಸಲಾಗಿದೆ.

ಘಟನೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಸ್ತುಸ್ಥಿತಿ ಅಧ್ಯಯನಕ್ಕೆ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ. ಸಮಿತಿಯಲ್ಲಿ ಪರಿಷತ್ ಸದಸ್ಯ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಗೀತಾ ವಿವೇಕಾನಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಶಾಸಕಿ ಭಾರತಿ ಶೆಟ್ಟಿ ಇದ್ದಾರೆ.




Leave a Reply

Your email address will not be published. Required fields are marked *

error: Content is protected !!