ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

80

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಮಂಗಳವಾರ ವಿಧಾನಸೌಧ ಮುಂದಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ವಿರುದ್ಧ ಹಾಗೂ ಪ್ರತಿಭಟನೆಗೆ ಅವಕಾಶ ನೀಡಿದ ರಾಜ್ಯ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ನಿಯೋಗ ದೂರು ದಾಖಲಿಸಿದೆ. ಈ ವೇಳೆ ಮಾಜಿ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ, ಪರಿಷತ್ ಸದಸ್ಯ ರಮೇಶಗೌಡ, ಬಿಜೆಪಿ ಮಾಧ್ಯಮ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ ಸೇರಿ ಇತರರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!