ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಬಿಜೆಪಿ ಮಾಜಿ ಸಚಿವ ರೇವು ನಾಯಕ ಬೆಳಮಗಿ, ಬಾಬುರಾವ್ ಪಾಟೀಲ ಚಿಂಚೋಳಿ ಸೇರಿದಂತೆ ಹಲವರು ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ್ ಗುತ್ತೇದಾರ್ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಇನ್ನು ಎಐಎಂಐಎಂ ಮುಖಂಡ ಮೋದಿನ್ ಪಟೇಲ್ ಸಹ ಕಾಂಗ್ರೆಸ್ ಸೇರಿದರು. ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುವುದು ಇನ್ನು ಮುಂದೆ ಹೆಚ್ಚಾಗಲಿದೆ.