ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಗೋಡ್ಸೆ ಸಂತತಿಯ ಬಿಜೆಪಿ ಎಂದ ಕಾಂಗ್ರೆಸ್

128

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹಾಗೂ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ದೇಶ ವಿಭಜನೆ ಹೇಳಿಕೆ ನೀಡಿರುವ ಅವರಿಬ್ಬರು ದೇಶ ದ್ರೋಹಿಗಳು. ಈ ರೀತಿ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಕುರಿತು ಶುಕ್ರವಾರ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಬರೆಯಲಾಗಿದೆ.

ಈ ಗುಂಡು ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡುತ್ತೇವೆ ಅಂತಾ ಹೇಳಲಾಗಿದೆ.




Leave a Reply

Your email address will not be published. Required fields are marked *

error: Content is protected !!