‘ಕೈ’ ಹಿಡಿದ ಸಂಗಣ್ಣ ಕರಡಿ

79

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿಜೆಪಿಯ ಸಂಗಣ್ಣ ಕರಡಿ ಇಂದು ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟರು. ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಅವರಿಗೆ ನೀಡಲಿಲ್ಲ. ಹೀಗಾಗಿ ಮುನಿಸಿಕೊಂಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್,, ಸಚಿವ ಶಿವರಾಜ್ ತಂಗಡಗಿ, ಶಾಸಕ ಲಕ್ಷ್ಮಣ ಸವದಿ ಸೇರಿ ಇತರರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ, ದಾಸರಹಳ್ಳಿ ಕೃಷ್ಣಮೂರ್ತಿ ಸಹ ಕಾಂಗ್ರೆಸ್ ಸೇರ್ಪಡೆಯಾದರು.




Leave a Reply

Your email address will not be published. Required fields are marked *

error: Content is protected !!