ಕಲಬುರಗಿಯಲ್ಲಿ ಬಿಜೆಪಿ ಮುಖಂಡನ ಹತ್ಯೆ

289

ಪ್ರಜಾಸ್ತ್ರ ಅಪರಾಧ ಸುದ್ದಿ

ಕಲಬುರಗಿ: ಸೇಡಂ ಪಟ್ಟಣದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ್ ಮುತ್ಯಾಲ(64) ಎಂಬುವರನ್ನು ಮಂಗಳವಾರ ಹತ್ಯೆ ಮಾಡಲಾಗಿದೆ. ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಹಾಗೂ ಟಿವಿ ಅಂಗಡಿ ಇಟ್ಟುಕೊಂಡಿದ್ದು, ಅಂಗಡಿಯಲ್ಲೇ ಹತ್ಯೆ ಮಾಡಲಾಗಿದೆ.

ದುಷ್ಕರ್ಮಿಗಳು ಕುತ್ತಿಗೆಗೆ ಹಗ್ಗ ಬಿಗಿದು, ಮರ್ಮಾಗಕ್ಕೆ ಚಾಕು ಇರಿದು ಕೊಲೆ ಮಾಡಲಾಗಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ಸೇಡಂ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ಸ್ಥಳಕ್ಕೆ ಭೇಟಿ ನೀಡಿದರು. ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!