ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನಿಗೆ ಜಾಮೀನು

227

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲಂಚ ಪ್ರಕರಣದ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ನ್ಯಾಯಮೂರ್ತಿ ನಟರಾಜನ್ ಅವರು ಮಧ್ಯಂತರ ಜಾಮೀನು ನೀಡಿದ್ದು, ಲೋಕಾಯುಕ್ತ ಪೊಲೀಸರು ದಾಖಲೆ ಸಲ್ಲಿಸುವ ತನಕ ಜಾಮೀನು ಎಂದು ಹೇಳಲಾಗಿದೆ.

48 ಗಂಟೆಯೊಳಗೆ ಶರಣಾಗುವಂತೆ ಶಾಸಕರಿಗೆ ಸೂಚಿಸಿದೆ. 5 ಲಕ್ಷ ರೂಪಾಯಿ ಬಾಂಡ್, ಇಬ್ಬರು ಶ್ಯೂರಿಟಿ ನೀಡುವಂತೆ ಸೂಚಿಸಲಾಗಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಲಾಗಿದೆ. ಕಳೆದ 6 ದಿನಗಳಿಂದ ತಲೆ ಮರೆಸಿಕೊಂಡಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಇವತ್ತೇನಾದರೂ ಪ್ರತ್ಯಕ್ಷರಾಗುತ್ತಾರಾ ಕಾದು ನೋಡಬೇಕಿದೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್, ಲೋಕಾಯುಕ್ತರ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಮನೆ, ಕಚೇರಿಯಲ್ಲಿ ಪರಿಶೀಲನೆ ನಡೆಸಿದಾಗ 8 ಕೋಟಿಗೂ ಅಧಿಕ ಹಣ ಹಾಗೂ ಇತರೆ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿ 6 ಮಂದಿ ವಿರುದ್ಧ ಕೇಸ್ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!