ಬಾಬುರಾವ್ ಚಿಂಚನಸೂರ್ ಮರಳಿ ಕಾಂಗ್ರೆಸ್ ಗೆ?

260

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಮಾಜಿ ಸಚಿವ, ಬಿಜೆಪಿ ಎಂಎಲ್ಸಿ ಬಾಬುರಾವ್ ಚಿಂಚನಸೂರ್ ಮರಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲಿ ಕೈ ಹಿಡಿಯಲಿದ್ದಾರಂತೆ.

ಸೋಮವಾರ ಎಂಎಲ್ಸಿ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರಂತೆ. ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಅನ್ನೋ ಕಾರಣಕ್ಕೆ ಕಾಂಗ್ರೆಸ್ ಗೆ ಮರಳುತ್ತಿದ್ದಾರಂತೆ. ಗುರುಮಠಕಲ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ.

ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡು ಶಾಸಕರಾಗಿ, ಸಚಿವರಾಗಿದ್ದ ಬಾಬುರಾವ್ ಚಿಂಚನಸೂರ್, ಕಳೆದ ಬಾರಿಯ ಚುನಾವಣೆಯ ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ಮತ್ತೆ ಕಾಂಗ್ರೆಸ್ ಗೆ ಬರುತ್ತಿದ್ದಾರೆ ಅನ್ನೋ ಮಾತುಗಳು ಕ್ಷೇತ್ರದಲ್ಲಿ ಜೋರಾಗಿ ಕೇಳಿ ಬರುತ್ತಿವೆ. ಗುರಮಠಕಲ್ ದಿಂದ 3 ಬಾರಿ, ಚಿತ್ತಾಪುರದಿಂದ 2 ಬಾರಿ ಶಾಸಕರಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!