ಶೆಟ್ಟರ್ ಗೆಲ್ಲುತ್ತಾರೆ ಎಂದ ಬಿಜೆಪಿ ಸಂಸದೆ

114

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿನ ಮತಗಟ್ಟೆಯಲ್ಲಿ ಬಿಜೆಪಿ ಸಂಸದೆ ಮಂಗಲಾ ಅಂಗಡಿ ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕನಿಷ್ಠ 13 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.

ಇನ್ನು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್, ಅಂಗಡಿ ಕುಟುಂಬದ ಬೀಗರು. ಈ ವೇಳೆ ಮಾಧ್ಯಮದವರು ನಿಮ್ಮ ಬೀಗರಾದ ಜಗದೀಶ್ ಶೆಟ್ಟರ್ ಗೆಲ್ಲುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ. ಅದು ಹುಬ್ಬಳ್ಳಿ ರಾಜಕಾರಣ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!