ಬ್ರೇಕಿಂಗ್ ನ್ಯೂಸ್
Search

ಬಿಜೆಪಿಗೆ ಸಂಸದ ಬಿ.ಎನ್ ಬಚ್ಚೇಗೌಡ ರಾಜೀನಾಮೆ

80

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮಾರ್ಚ್ 18ರಂದು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ರಾಜೀನಾಮೆ ಪತ್ರ ಸಲ್ಲಿಸಿರುವುದು ತಿಳಿದು ಬಂದಿದೆ.

ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಸದರಿ ರಾಜೀನಾಮೆಯನ್ನು ಅಂಗೀಕರಸಬೇಕೆಂದು ಈ ಮೂಲಕ ತಮ್ಮನ್ನು ಕೋರುತ್ತೇನೆ. 2008ರಲ್ಲಿ ಬಿಜೆಪಿಯಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕನಾಗಿ, ಸಚಿವನಾಗಿ ಮತ್ತು 2019ರಲ್ಲಿ ಸಂಸದನಾಗಿ ಸಾರ್ವಜನಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಬಿಜೆಪಿ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬರೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!