ರಾಜಕೀಯಕ್ಕೆ ಗೌತಮ್ ಗಂಭೀರ್ ವಿದಾಯ!

107

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪೂರ್ವ ದೆಹಲಿಯ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಂಬರುವ ಕ್ರಿಕೆಟ್ ಚಟುವಟಿಕೆಯತ್ತ ಗಮನ ಹರಿಸಬೇಕಾಗಿದೆ. ಹೀಗಾಗಿ ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದಿದ್ದಾರೆ.

ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಮನವಿ ಮಾಡಿದ್ದಾರೆ. ಜನರ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಟ್ಟ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು ಎಂದಿದ್ದಾರೆ.
Leave a Reply

Your email address will not be published. Required fields are marked *

error: Content is protected !!