ಬಿಜೆಪಿ ನಾಯಕರೆ ನಮ್ಮ ಕೈಗೆ ಬಡಿಗೆ ಕೊಟ್ಟು ಯಾಕೆ ಬಡಿಸಿಕೊಳ್ತೀರಿ: ಸಿಎಂ ಸಿದ್ದರಾಮಯ್ಯ

80

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹೊಸಕೋಟೆಯ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಗೆ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿ ಹಿಂದೂಗಳ ಅಧಿಕಾರಿ ಕಿತ್ತುಕೊಳ್ಳಲು ಹೊರಟಿದೆ ಎನ್ನುವ ಬಿಜೆಪಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೆ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ ಬಿಜೆಪಿ ನಾವು ಸತ್ಯ ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಸುಳ್ಳು ಆರೋಪದ ಹೇಳಿಕೆಯನ್ನು ಅಳಿಸಿಹಾಕಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಕಾಲದಲ್ಲಿಯೇ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಲಾಗಿತ್ತು ಎನ್ನುವ ಸಂಗತಿ ನಾನು ದಾಖಲೆ ಸಮೇತ ಮುಂದಿಟ್ಟಿದ್ದು, ಬಣ್ಣ ಬಯಲಾದ ಕೂಡಲೇ ಎಚ್ಚೆತ್ತುಕೊಂಡು ಲಜ್ಜೆಗೆಟ್ಟ ಬಿಜೆಪಿ ಸಾಮಾಜಿಕ ಮಾಧ್ಯಮಗಳಿದ್ದ ತನ್ನ ಹೇಳಿಕೆಗಳನ್ನು ಅಳಿಸಿ ಹಾಕಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!