ಬಿಜೆಪಿಯ ಸಂಸದೀಯ ಮಂಡಳಿಯಲ್ಲಿ ಬಿಎಸ್ವೈಗೆ ಸ್ಥಾನ

307

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಬಿಜೆಪಿ 9 ಸದಸ್ಯರೊಂದಿಗೆ ಸಂದೀಯ ಮಂಡಳಿಯನ್ನು ರಚನೆ ಮಾಡಿದೆ. ಅದರಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಹ ಇದ್ದಾರೆ. ಈ ಮೂಲಕ ಯಡಿಯೂರಪ್ಪಗೆ ಮತ್ತೊಂದು ದೊಡ್ಡ ಸ್ಥಾನ ನೀಡಲಾಗಿದೆ.

ಇದರಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಮಾಜಿ ಸಿಎಂ ಯಡಿಯೂರಪ್ಪ, ಆಸ್ಸಾಂ ಮಾಜಿ ಸಿಎಂ ಸರ್ಬಾನಂದ್ ಸೋನವಾಲ್ ಸೇರಿ 9 ನಾಯಕರಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಅವರನ್ನು ಕೈ ಬಿಡಲಾಗಿದೆ.

ಬಿಜೆಪಿ ಸಂಸದೀಯ ಮಂಡಳಿ ದೇಶದಲ್ಲಿ ಪಕ್ಷಕ್ಕೆ ಸಂಬಂಧಿಸಿದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೆ. ರಾಜ್ಯಗಳ ಮುಖ್ಯಮಂತ್ರಿ ಆಯ್ಕೆ, ರಾಜ್ಯಾಧ್ಯಕ್ಷರ ಆಯ್ಕೆ ಸೇರಿದಂತೆ ಪ್ರಮುಖ ವಿಚಾರಗಳ ನಿರ್ಧಾರ ಆಗುವುದು ಇಲ್ಲಿಯೇ. ಹೀಗಾಗಿ ಯಡಿಯೂರಪ್ಪಗೆ ಮತ್ತೊಂದು ದೊಡ್ಡ ಸ್ಥಾನ ಸಿಕ್ಕಿದೆ ಎನ್ನಬಹುದು.




Leave a Reply

Your email address will not be published. Required fields are marked *

error: Content is protected !!