ನಾಳೆ ಬಿಜೆಪಿ ಪಕ್ಷ ಸಂಘಟನಾ ಸಭೆ

183

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನವೆಂಬರ್ 8ರಂದು ಬಿಜೆಪಿ ಪಕ್ಷ ಸಂಘಟನಾ ಸಭೆ ನಡೆಯಲಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಮಿಸಲಿದ್ದಾರೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಬೂತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ, ಸಿಂದಗಿ ಪುರಸಭೆ, ಆಲಮೇಲ ಪಟ್ಟಣ ಪಂಚಾಯ್ತಿ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಸೇರಿದಂತೆ ವಿವಿಧ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಮಂಡಳ ಅಧ್ಯಕ್ಷ ಈರಣ್ಣ ರಾವೂರ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಸಿದ್ದು ಪಾಟೀಲ, ರಾಜು ಪೂಜಾರಿ ಸೇರಿ ಇತರರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!