ಸಿದ್ದರಾಮಯ್ಯ ವಿರುದ್ಧ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ

252

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ದಲಿತರ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು, ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶುಕ್ರವಾರ ಹುಬ್ಬಳ್ಳಿ ಮಿನಿ ವಿಧಾನಸೌಧದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೆ ವೇಳೆ ಸಿದ್ದರಾಮಯ್ಯನವರ ಪ್ರತಿಕೃತಿ ದಹನ ಮಾಡಲಾಯಿತು.

ಸಿಂದಗಿ ವಿಧಾನಸಭೆ ಉಪ ಚುನಾವಣೆಯ ಬಹಿರಂಗ ಸಭೆಯಲ್ಲಿ ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿ ಸೇರಿದ್ದಾರೆ ಎಂದು ಹೇಳುವ ಮೂಲಕ ಅವಮಾನ ಮಾಡಿದ್ದಾರೆ. ಇದು ದಲಿತ ಸಮುದಾಯದ ಭಾವನೆಗೆ ದಕ್ಕೆ ತರುವಂತಹದ್ದಾಗಿದೆ. ಹೀಗಾಗಿ ಬಹಿರಂಗವಾಗಿ ಕ್ಷಮೆ ಕೇಳಬೇಕು. ಸವಿಂಧಾನದ ಅಡಿಯಲ್ಲಿ ರಾಜ್ಯಪಾಲರು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಬಸವರಾಜ ಅಮ್ಮನಬಾವಿ, ಮಹೇಂದ್ರ ಕೌತಾಳ, ಪರಶುರಾಮ ಪೂಜಾರ, ಪ್ರಭು ನವಲಗುಂದಮಠ, ಅಣ್ಣಪ್ಪ ಗೋಕಾಕ, ಪುಂಡಲಿಕ ತಳವಾರ, ಪ್ರಕಾಶ ಏಳಗುಡ್ಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!