ಬಳ್ಳಾರಿಯಲ್ಲಿ ನಾಳೆ ಬಿಜೆಪಿ ಎಸ್ಟಿ ಮೋರ್ಚಾ ಸಮಾವೇಶ

143

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಸಿರುವ ರಾಜಕೀಯ ಪಕ್ಷಗಳು ಬೃಹತ್ ಸಮಾವೇಶಗಳನ್ನು ಈಗಿನಿಂದಲೇ ನಡೆಸುತ್ತಿವೆ. ನಾಳೆ ಬಳ್ಳಾರಿಯಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ನವಶಕ್ತಿ ಸಮಾವೇಶ ನಡೆಯಲಿದೆ.

ಈ ಬಗ್ಗೆ ಮಾತನಾಡಿರುವ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಪ್ಪರಾಜು ಹವಾಲ್ದಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ಸಿಎಂ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ, ರಾಜ್ಯ ಸಚಿವರು ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ರಾಯಚೂರು, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬಳ್ಳಾರಿ, ಹಳೆ ಮೈಸೂರು, ಮಧ್ಯ ಕರ್ನಾಟಕ ಸೇರಿದಂತೆ ಎಲ್ಲಡೆಯಿಂದ ಜನರು ಬರಲಿದ್ದು, ಸುಮಾರು 10 ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!