ಬಿಜೆಪಿ ಸರ್ಕಾರ ರಚನೆ ಮಾಡುತ್ತೆ: ಯಡಿಯೂರಪ್ಪ

96

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳು ಏನೇ ಬರಲಿ. ಬಿಜೆಪಿ ಸರ್ಕಾರ ರಚನೆಯಾಗುತ್ತೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕಾವೇರಿ ನಿವಾಸದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, 115ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಬಹುಮತದೊಂದಿಗೆ ಸರ್ಕಾರ ರಚನೆ ಮಾಡುತ್ತೇವೆ ಎಂದರು.

ಮುಖ್ಯಮಂತ್ರಿ ಯಾರಾಗಬೇಕು ಎಂದು ಶಾಸಕಾಂಗ ಸಭೆಯಲ್ಲಿ ನಿರ್ಧಾರಿಸಲಾಗುತ್ತೆ. ಈ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಎಕ್ಸಿಟ್ ಪೋಲ್ ಏನೇ ಹೇಳಿದರೂ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ. ಯಾರದೇ ಬೆಂಬಲ ಇಲ್ಲದೆ ಸರ್ಕಾರ ರಚನೆ ಮಾಡುತ್ತೇವೆ. ಕಾಂಗ್ರೆಸ್ ಗಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ನಾವೇ ಸರ್ಕಾರ ರಚಿಸುತ್ತೇವೆ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.

ಮೇ 13ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. ಅಂದು ಯಾವ ಪಕ್ಷಕ್ಕೆ ಮತದಾರ ಜೈ ಎಂದಿದ್ದಾನೆ ಅನ್ನೋದು ತಿಳಿಯಲಿದೆ.


TAG


Leave a Reply

Your email address will not be published. Required fields are marked *

error: Content is protected !!