ಬಿಜೆಪಿಯ ಪ್ರವೀಣ್ ನೆಟ್ಟಾರ್ ಹತ್ಯೆ: ಸಿಎಂ ಖಂಡನೆ

192

ಪ್ರಜಾಸ್ತ್ರ ಅಪರಾಧ ಸುದ್ದಿ

ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನಟ್ಟಾರು ಎಂಬುವರನ್ನು ಕಳೆದ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೀಗಾಗಿ ಬುಧವಾರ ಮೂರು ತಾಲೂಕುಗಳಲ್ಲಿ ಬಂದ್ ಗೆ ಕರೆ ನೀಡಲಾಗಿದೆ.

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿಯ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಜರಂಗದಳ, ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್ ಬಂದ್ ಗೆ ಕರೆ ನೀಡಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತಿ ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!