ನಿರಾಣಿ ಒಡೆತನದ ಡಿಸ್ಟಲರಿ ಘಟಕದಲ್ಲಿ ಸ್ಫೋಟ, ಓರ್ವ ಸಾವು

155

ಪ್ರಜಾಸ್ತ್ರ ಸುದ್ದಿ

ಬಾಗಲಕೋಟೆ: ಸಚಿವ ಮುರುಗೇಶ ನಿರಾಣಿ ಒಡೆತನದ ಡಿಸ್ಟಲರಿ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ. ಗುರುನಾಥ ಹುಚ್ಚಣ್ಣನವರ ಮೃತ ವ್ಯಕ್ತಿಯೊಂದು ಗುರುತಿಸಲಾಗಿದೆ.

ಗಾಯಗೊಂಡ ನಾಲ್ವರನ್ನು ಮುಧೋಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಫೋಟದ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!