ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆ ಆದೇಶ ರದ್ದು

141

ಪ್ರಜಾಸ್ತ್ರ ಸುದ್ದಿ

ನವದೆಹಲಿ: 2002 ಗೋದ್ರಾ ರೈಲು ದುರಂತದ ನಂತರ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಆಕೆ ಕುಟುಂಬದ 7 ಜನರನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಸೋಮವಾರ ಆದೇಶ ಹೊರಡಿಸಿದೆ.

ಗುಜರಾತ್ ಸರ್ಕಾರದ ನಿರ್ಧಾರ ಸರಿಯಿಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನಾ, ಉಜ್ವಲ್ ಭುಯಾನ್ ಅವರಿದ್ದ ಪೀಠ ಬಿಡುಗಡೆ ಆದೇಶ ರದ್ದುಗೊಳಿಸಿದೆ.

2002ರಲ್ಲಿ ನಡೆದ ಈ ಘಟನೆಯಲ್ಲಿ ಬಿಲ್ಕಿಸ್ ಬಾನು 21 ವರ್ಷದವರಾಗಿದ್ದರು. ಅಲ್ಲದೇ 5 ತಿಂಗಳು ಗರ್ಭಿಣಿಯಾಗಿದ್ದರು. ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ ಅವರ 3 ವರ್ಷದ ಮಗಳು ಸೇರಿ 7 ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಇದರಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಆಗಸ್ಟ್ 15, 2022ರಂದು ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು.




Leave a Reply

Your email address will not be published. Required fields are marked *

error: Content is protected !!