ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. 38 ವರ್ಷದ ಜ್ಯೋತಿಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಕೆರೂರು ಗ್ರಾಮದ ನಿವಾಸಿ ಅಂತಾ ತಿಳಿದು ಬಂದಿದೆ.
ತಡರಾತ್ರಿ ಕೊಲೆ ಮಾಡಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಭೇಟ ನೀಡಿದ ಚಿಕ್ಕೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.