ಪ್ರಜಾಸ್ತ್ರ ಸುದ್ದಿ
ಮುಂಬೈ: ಇಲ್ಲಿನ ಪ್ರಮುಖ ರೈಲು ನಿಲ್ದಾಣ ಹಾಗೂ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಮಾಡಲಾಗಿದೆ. ಈ ಸಂಬಂಧ ಎಲ್ಲೆಡೆ ತಪಾಸಣೆ ನಡೆಸಲಾಗ್ತಿದೆ. ಆದ್ರೆ, ಇದುವರೆಗೂ ಯಾವುದೇ ರೀತಿಯ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ.
ಕಳೆದ ಕರೆ ಮಾಡಿದ ವ್ಯಕ್ತಿಯೊಬ್ಬರ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್, ದಾದಲ್ ಹಾಗೂ ಬೈಕುಲ್ಲಾ ರೈಲು ನಿಲ್ದಾಣ ಮತ್ತು ನಟ ಅಮಿತಾಬ್ ಬಚ್ಚನ್ ಮನೆಯಲ್ಲಿ ಬಾಂಬ್ ಇಟ್ಟಿರುವ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.