ಬೆಂಗಳೂರಿನ 6 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

563

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯ 6 ಪ್ರತಿಷ್ಠಿತ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಅನ್ನೋ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರಲ್ಲಿ ಆತಂಕ ಮೂಡಿದೆ.

ಮಹದೇಪುರದ ಗೋಪಾಲನ್ ಇಂಟರ್ ನ್ಯಾಷನಲ್ ಶಾಲೆ, ಡೆಲ್ಲಿ ಪಬ್ಲಿಕ್ ಸ್ಕೂಲ್, ನ್ಯೂ ಅಕಾಡೆಮಿ ಸ್ಕೂಲ್, ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಇಂಡಿಯನ್ ಪಬ್ಲಿಕ್ ಶಾಲೆ ಸೇರಿದಂತೆ 6 ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಅನ್ನೋ ಬೆದರಿಕೆಯನ್ನು ಇ-ಮೇಲ್ ಮೂಲಕ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಹೀಗಾಗಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!