ಬಾಲಕನನ್ನು ಬೆತ್ತಲೆಗೊಳಿಸಿದ ಪ್ರಕರಣ: ಓರ್ವ ಪೊಲೀಸ್ ವಶಕ್ಕೆ

446

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಲಾಗಿತ್ತು. ಅಲ್ಲದೆ ಆತನ ಮೇಲೆ ಬಣ್ಣ ಎರಚಿ ಹಲ್ಲೆ ಮಾಡಲಾದ ಘಟನೆ ಸಂಬಂಧ, ಗ್ರಾಮದ ಮುಖಂಡನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಲಕ ಅಶ್ಲೀಲವಾಗಿ ಬೈದಾಡುತ್ತಾನೆ ಎಂದು ಹೇಳಿ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದು, ಅಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಬಸವನಬಾಗೇವಾಡಿ ಠಾಣೆ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!