ಕೆ.ಕವಿತಾ ಕಸ್ಟಡಿ ಅವಧಿ ವಿಸ್ತರಣೆ

89

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ಬಿಆರ್ ಎಸ್ ನಾಯಕಿ ಕೆ.ಕವಿತಾ ಕಸ್ಟಡಿ ಅವಧಿ ವಿಸ್ತರಣೆ ಮಾಡಲಾಗಿದೆ.

ದೆಹಲಿ ರೋಸ್ ಅವೆನ್ಯೂ ಕೋರ್ಟ್ ಏಪ್ರಿಲ್ 23ರ ತನಕ ಕಸ್ಟಡಿ ಅವಧಿ ವಿಸ್ತರಿಸಿದೆ. ಕೋರ್ಟ್ ಗೆ ಹೋಗುವ ಮೊದಲು ಮಾತನಾಡಿದ ಕವಿತಾ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ಉದ್ದೇಶಪೂರ್ವಕವಾಗಿ ವಿಪಕ್ಷ ನಾಯಕರನ್ನು ಗುರಿ ಮಾಡಲಾಗುತ್ತಿದೆ ಎಂದಿದ್ದಾರೆ.

ಮಾರ್ಚ್ 15, 2024ರಂದು ಕವಿತಾರನ್ನು ಬಂಧಿಸಲಾಗಿದೆ. ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಸಹ ಆಗಿದೆ. ಈ ಸಂಬಂಧ ಕೇಂದ್ರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿವೆ.




Leave a Reply

Your email address will not be published. Required fields are marked *

error: Content is protected !!