ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ 30ಕ್ಕೂ ಹೆಚ್ಚು ದೇಶಗಳು

463

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನವೆಂಬರ್ 17ರಿಂದ 19ರ ತನಕ ಮೂರು ದಿನಗಳ ಕಾಲ ಬೆಂಗಳೂರು ತಂತ್ರಜ್ಞಾನ ಶೃಂಗ 2021 ಕಾರ್ಯಕ್ರಮ ನಡೆಯಲಿದೆ. ಇದನ್ನು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಉದ್ಘಾಟಿಸಲಿದ್ದಾರೆ ಎಂದು ಐಟಿಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಡಾ.ಸಿ.ಎನ್ ಅಶ್ವಥನಾರಾಯಣ್ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ 3 ದಿನಗಳ ಕಾಲ ನಡೆಯಲಿದೆ. 30ಕ್ಕೂ ಹೆಚ್ಚು ದೇಶಗಳು ಇದರಲ್ಲಿ ಪಾಲ್ಗೊಳ್ಳಲಿವೆ. ಇಸ್ರೇಲ್, ಆಸ್ಟ್ರೇಲಿಯಾ ಪ್ರಧಾನಿಗಳು, ದಾವೋಸ್ ನ ವಿಶ್ವ ಆರ್ಥಿಕ ವೇದಿಕೆ ಮುಖ್ಯಸ್ಥರು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಈ ವೇಳೆ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಉಪನ್ಯಾಸ ನೀಡಲಾಗುತ್ತೆ. ಅಭಿವೃದ್ಧಿ ವಿಚಾರಗಳ ಚರ್ಚೆ ನಡೆಯುತ್ತೆ. ಭಾರತ ಹಾಗೂ ಇತರೆ ದೇಶಗಳ ನಡುವೆ ಒಡಂಬಡಿಕೆ ಸಹ ನಡೆಯಲಿದೆ ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!