ಫೆಬ್ರವರಿಯಲ್ಲಿ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ

136

ಪ್ರಜಾಸ್ತ್ರ ಸುದ್ದಿ

ಹಾವೇರಿ: ಈ ವರ್ಷದ ಆಯವ್ಯಯವನ್ನು ಫೆಬ್ರವರಿಯಲ್ಲಿ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಶಿಗ್ಗಾಂವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಣಕಾಸು ಇಲಾಖೆಯೊಂದಿಗೆ ಎರಡು ಬಾರಿ ಚರ್ಚಿಸಿದ್ದೇನೆ. ಫೆಬ್ರವರಿಯಲ್ಲಿ ಬಜೆಟ್ ಮಂಡಿಸುತ್ತೇನೆ ಎಂದರು.

ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘ, ಸಂಸ್ಥೆಗಳೊಂದಿಗೆ ಚರ್ಚಿಸುತ್ತೇನೆ. ಜನವರಿ ತಿಂಗಳಿನಿಂದ ಬಜೆಟ್ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಅಂತಾ ತಿಳಿಸಿದರು.

2023ರ ವಿಧಾನಸಭಾ ಚುನಾವಣೆ ತುಂಬಾ ಹತ್ತಿರದಲ್ಲಿ ಇರುವುದರಿಂದ ಮತಗಳಿಕೆಗೆ ಯಾವ ರೀತಿಯ ಯೋಜನೆಗಳನ್ನು ನೀಡಬೇಕು, ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಬಿಡುಗಡೆ ಮಾಡಬೇಕು, ಏನೆಲ್ಲ ಯೋಜನೆ ರೂಪಿಸಲಾಗುತ್ತೆ ಅನ್ನೋದು ಸೇರಿದಂತೆ ಹತ್ತು ಹಲವು ಕೊಡುಗೆಗಳು ಬಿಜೆಟ್ ನಲ್ಲಿ ಇರಲಿವೆ ಎಂದು ಹೇಳಬಹುದು.




Leave a Reply

Your email address will not be published. Required fields are marked *

error: Content is protected !!