ನಿರ್ಮಾಣ ಹಂತದ ಕಟ್ಟಡ ಕುಸಿತ, ಇಬ್ಬರ ಸಾವು

149

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ 20 ಕಾರ್ಮಿಕರು ಗಾಯಗೊಂಡಿದ್ದಾರೆ.

ಸೇಂಟ್ ಆಗ್ನೇಸ್ ಎನ್ನುವ ಶಾಲೆಯ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿತ್ತು. 2ನೇ ಅಂತಸ್ತಿನ ಕಟ್ಟಡ ನಿರ್ಮಾಣ ವೇಳೆ ಕುಸಿದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸರು ಬಂದಿದ್ದು, ಕಾರ್ಯಾಚರಣೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!