ನಿರ್ಮಾಣ ಹಂತದ ಕಟ್ಟಡ ಕುಸಿತ, ಇಬ್ಬರ ಸಾವು

130

ಪ್ರಜಾಸ್ತ್ರ ಸುದ್ದಿ

ಕೊಲ್ಕತ್ತಾ: ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಭಾನುವಾರ ತಡರಾತ್ರಿ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ, ಗಾರ್ಡನ್ ರೀಚ್ ಪ್ರದೇಶದ ಮೊಲ್ಲಾ ಬಾಗಾನ್ ನಲ್ಲಿ ನಡೆದಿದೆ.

ಸುಮಾರು 10 ಮಂದಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಲಾಗಿದೆ. ತಡರಾತ್ರಿ ಶೋಧ ಕಾರ್ಯ ಮುಂದುವರೆಸಲಾಗಿತ್ತು ಎಂದು ತಿಳಿದು ಬಂದಿದೆ. ರಕ್ಷಣಾ ತಂಡ, ಹಿರಿಯ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ದಳ ಸ್ಥಳಕ್ಕೆ ಭೇಟಿ ಕೊಟ್ಟು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ತುರ್ತು ರಕ್ಷಣೆ ಹಾಗೂ ಪರಿಹಾರಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!