ಪುನೀತ್ ಸರ್ 5 ಲಕ್ಷ ರೂಪಾಯಿ ಕೊಟ್ಟಿಲ್ಲ: ಬುಲೆಟ್ ಪ್ರಕಾಶ್ ಪುತ್ರ

336

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಬಳಿಕ ಅವರ ಸಮಾಜಮುಖಿ ಕೆಲಸಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ಮೂಲಕ ಯಾರಿಗೆ ಹೇಳದೆ ಸದ್ದಿಲ್ಲದೆ ಅಪ್ಪು ಮಾಡಿದ ಕೆಲಸಗಳು ಎಷ್ಟೊಂದಿವೆ ಅನ್ನೋದು ಜನರಿಗೆ ಈಗ ತಿಳಿಯುತ್ತಿದೆ. ಇದರ ನಡುವೆ ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನದ ಬಳಿಕ ಅವರ ಮನೆಗೆ ಹೋಗಿ ಸಾಂತ್ವಾನ ಹೇಳಿ 5 ಲಕ್ಷ ರೂಪಾಯಿ ಕೊಟ್ಟಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್, ಅಣ್ಣಾವ್ರ ಕುಟುಂಬದ ಬಗ್ಗೆ ನಮಗೆ ತುಂಬಾ ಗೌರವ ಇದೆ. ಪುನೀತ್ ಸರ್ ನಮಗೆ 5 ಲಕ್ಷ ರೂಪಾಯಿ ಕೊಟ್ಟಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಹಬ್ಬಿಸುತ್ತಿರುವುದೆಲ್ಲ ವದಂತಿ. ಪುನೀತ್ ಸರ್ 5 ಲಕ್ಷ ರೂಪಾಯಿ ಕೊಟ್ಟಿಲ್ಲ ಎಂದು ರಕ್ಷಕ್ ಹೇಳಿದ್ದಾನೆ.




Leave a Reply

Your email address will not be published. Required fields are marked *

error: Content is protected !!