ಖಾಸಗಿ ಬಸ್ ಅಪಘಾತ, ಇಬ್ಬರ ಸಾವು

161

ಪ್ರಜಾಸ್ತ್ರ ಸುದ್ದಿ

ಹಾವೇರಿ: ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಹತ್ತಿರ ಗುರುವಾರ ನಸುಕಿನಜಾವ ನಡೆದಿದೆ.

ಬಸ್ ಚಾಲಕ ಸದಾನಂದ ಬೆಳಗಾವಿ(50) ಹಾಗೂ ಪ್ರಯಾಣಿಕ ರಾಹುಲ್(22) ಮೃತ ದುರ್ದೈವಿಗಳು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮಿರಜ್ ಗೆ ಹೊರಟಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅನಾಹುತ ನಡೆದಿದೆ.




Leave a Reply

Your email address will not be published. Required fields are marked *

error: Content is protected !!