ತುಮಕೂರಲ್ಲಿ ಬಸ್ ಪಲ್ಟಿ: 8 ಪ್ರಯಾಣಿಕರ ಸಾವು

398

ಪ್ರಜಾಸ್ತ್ರ ಸುದ್ದಿ

ಪಾವಗಡ: ತಾಲೂಕಿನ ಪಳವಳ್ಳಿಕಟ್ಟೆ ಹತ್ತಿರ ಖಾಸಗಿ ಬಸ್ ವೊಂದು ಪಲ್ಟಿಯಾದ ಪರಿಣಾಮ 8 ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ 25ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಹಾಗೂ ತುಮಕೂರು ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಸ್ಥಳಕ್ಕೆ ಹೋಗಲು ತಿಳಿಸಿದ್ದೇನೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದ್ದೇನೆ ಎಂದರು.




Leave a Reply

Your email address will not be published. Required fields are marked *

error: Content is protected !!