ಬಸ್ ಅಪಘಾತ, 20ಕ್ಕೂ ಹೆಚ್ಚು ಜನರಿಗೆ ಗಾಯ

189

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಜಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ನಗರದ ಹೊರವಲಯದ ಬೇತೂರ ರಸ್ತೆಯಲ್ಲಿ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಸೋಮವಾರ ನಡೆದಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬೇತೂರ ರಸ್ತೆಯಲ್ಲಿ ಸಣ್ಣ ಹಳ್ಳಕ್ಕೆ ಕಟ್ಟಲಾಗಿರುವ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಓರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದಿಂತೆ ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!