Search

ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

386

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಎರಡು ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಹತ್ತಿರ ಶನಿವಾರ ಸಂಜೆ ಸುಮಾರು 4.30ರ ಸಮಯದಲ್ಲಿ ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಪಘಾತದಿಂದಾಗಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಹೊರಟಿದ್ದ ಬಸ್‌ ಹಾಗೂ ವಿಜಯಪುರದಿಂದ ಸಿಂದಗಿ ಕಡೆ ಬರುತ್ತಿದ್ದ ಬಸ್ ನಡುವೆ ಅಪಘಾತವಾಗಿದೆ.

ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.




Leave a Reply

Your email address will not be published. Required fields are marked *

error: Content is protected !!