ಬಸ್ ಹಿಂಬದಿ ಚಕ್ರಕ್ಕೆ ಸಿಲುಕಿ ಸಿಂದಗಿಯಲ್ಲಿ ಓರ್ವ ಸಾವು

798

ಪ್ರಜಾಸ್ತ್ರ ಬ್ರೇಕಿಂಗ್ ನ್ಯೂಸ್

ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಬಸ್ ನಿಲ್ದಾಣದೊಳಗೆ ಬಸ್ ನಿಲ್ಲಿಸುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಗೊಲ್ಲಾಳಪ್ಪ ವಿಟೋಭಾ ಕಡ್ಲೇವಾಡ(43) ಅನ್ನೋ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಸಿಂದಗಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವ್ಯಕ್ತಿ ಎಂದು ಹೇಳಲಾಗ್ತಿದೆ. ನಿಲ್ದಾಣದಲ್ಲಿ ಬಸ್ ನಿಲ್ಲಿಸುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಮೃತನಿಗೆ ಇಬ್ಬರು ಮಕ್ಕಳಿದ್ದಾರೆ. ಸ್ಥಳಕ್ಕೆ ಸಿಪಿಐ ಎಚ್.ಎಂ ಪಾಟೀಲ, ಪಿಎಸ್ಐ ಹೆಚ್.ಎಸ್ ಹೊಸಮನಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಆಗಮಿಸಿದ್ದು ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಮಾಹಿತಿ ಪಡೆಯಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!