ಬಸ್ ಪಲ್ಟಿ: ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ

222

ಪ್ರಜಾಸ್ತ್ರ ಸುದ್ದಿ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಹತ್ತಿರ ಖಾಸಗಿ ಬಸ್ ಪಲ್ಟಿಯಾಗಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ಪಾವಗಡದಲ್ಲಿ ಖಾಸಗಿ ಬಸ್ ಗಳ ಪರವಾನಿಗೆ ರದ್ದು ಮಾಡಲು ಸೂಚಿಸಿದ್ದೇನೆ. ಸಾರಿಗೆ ಬಸ್ ಓಡಿಸಲು ಕ್ರಮ ತೆಗೆದುಕೊಳ್ಳಾಗುತ್ತೆ. ಚಾಲಕನ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ ಅನ್ನೋದು ಮೇಲ್ನೋಟಕ್ಕೆ ತಿಳಿಯುತ್ತಿದೆ. ವೈಯಕ್ತಿಕವಾಗಿ ಮೃತರ ಕುಟುಂಬಗಳಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!