ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ

200

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯವಾಗಿರುವ ಘಟನೆ ಸಾಗರ ತಾಲೂಕಿನ ತಾಳಗುಪ್ಪದ ಹತ್ತಿರ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಒಂದು ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲವೆಂದು ಹೇಳಲಾಗುತ್ತಿದೆ.

ಭಟ್ಕಳದಿಂದ ಬೈಂದೂರಿಗೆ ಹೊರಟಿದ್ದ ಬಸ್ ಬಲೇಗಾರ್ ಕ್ರಾಸ್ ಬಳಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಸಾಗರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಂತ್ರಿಕ ದೋಷದಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!