ಬಸ್-ಬೈಕ್ ಅಪಘಾತ

394

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಗಬಸಾವಳಗಿ-ಹಂಚನಾಳ ಗ್ರಾಮದ ನಡುವಿನ ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರನೊಬ್ಬ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.

ಕಲಬುರಗಿ ಕಡೆಯಿಂದ ಬರುತ್ತಿದ್ದ ಬಸ್ ಹಾಗೂ ಸಿಂದಗಿ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ಪರಿಣಾಮ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ.

ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಕುರಿತು ಮಾಹಿತಿ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!