ಆಟೋ-ಬಸ್ ನಡುವೆ ಅಪಘಾತ

490

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಆರ್.ಡಿ ಪಾಟೀಲ ಕಾಲೇಜು ಹತ್ತಿರ ಆಟೋ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಆಟೋಗೆ ಬಸ್ ಡಿಕ್ಕಿಯಾದ ಪರಿಣಾಮ ಆಟೋ ನುಜ್ಜುಗುಜ್ಜಾಗಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನಂತೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!