ಹಡಗಲಿ ಬಳಿ ಬಸ್-ಲಾರಿ ಅಪಘಾತ: ಇಬ್ಬರ ಸಾವು

295

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕರ್ನಾಟಕ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಪ್ರಯಾಣಿಕರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಹಡಗಲಿ ಗ್ರಾಮದ ಹತ್ತಿರ ಬುಧವಾರ ಮಧ್ಯಾಹ್ನ ನಡೆದಿದೆ.

ಘಟನೆಯಲ್ಲಿ ಐವರು ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿಯಿಂದ ವಿಜಯಪುರ ಮಾರ್ಗವಾಗಿ ಗಾಣಗಾಪುರಕ್ಕೆ ಹೊರಟಿದ್ದ ಬಸ್ ಹಾಗೂ ಕಲಬುರಗಿಯಿಂದ ವಿಜಯಪುರ ಕಡೆ ಹೊರಟಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಆಟೋ ಸಹ ಅಪಘಾತಗೊಂಡಿದೆ.

ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಇದರ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!