ಪೌರತ್ವ ಕಾಯ್ದೆ ವಿರುದ್ಧ ಹೋರಾಟ: ವಿವಿಧೆಡೆ ಶಾಲಾ, ಕಾಲೇಜುಗಳಿಗೆ ರಜೆ

341

ನವದೆಹಲಿ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಷ್ಟ್ರರಾಜಧಾನಿ ಸೇರಿದಂತೆ ಈಶಾನ್ಯ ಭಾಗದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಾಮಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವಿನ ಜಟಾಪಟಿ ಮುಂದುವರೆದಿದೆ.

ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದ ಪ್ರತಿಭಟನೆ ಇಂದು ಸಹ ಮುಂದುವರೆಯುವ ಸಾಧ್ಯತೆಯಿದೆ. ಹೀಗಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಪ್ರದೇಶದ ಆಲಿಗರ್ ಜಿಲ್ಲಾಡಳಿತ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿದೆ. ಅಲ್ದೇ, ಆಲಿಗರ್, ಸಹಾನಪುರ್ ಹಾಗೂ ಮಿರತ್ ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆಯನ್ನ ಬಂದ್ ಮಾಡಲಾಗಿದೆ.

ಪಶ್ವಿಮ ಬಂಗಾಳದಲ್ಲಿಯೂ ಪ್ರತಿಭಟನೆ ಜೋರಾಗಿದೆ. ಸ್ವತಃ ಇಲ್ಲಿನ ಟಿಎಂಸಿ ಸರ್ಕಾರ ಸಹ ಬೃಹತ್ ಪ್ರತಿಭಟನೆ ನಡೆಸ್ತಿದೆ. ಸಿಎಂ ಮಮತಾ ಬ್ಯಾನರ್ಜಿ ಸಹ ಪೌರತ್ವ ಕಾಯ್ದೆ ತಿದ್ದುಪಡಿಯನ್ನ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!