ಜಿಂದಾಲ್ ಕಂಪನಿಗೆ ನೀಡಿದ್ದ ಭೂಮಿ ವಾಪಸ್ ಪಡೆಯುವ ನಿರ್ಧಾರ

230

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಕೆಲವು ತಿಂಗಳು ಹಿಂದೆ ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿ ನೀಡಲಾಗಿತ್ತು. ಈ ಸಂಬಂಧ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಕೋರ್ಟ್ ಮೆಟ್ಟಿಲು ಸಹ ಏರಲಾಗಿದೆ. ಹೀಗಾಗಿ ನೀಡಿದ್ದ ಭೂಮಿಯನ್ನ ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಜಿಂದಾಲ್ ಕಂಪನಿಯಿಂದ ರಾಜ್ಯದ ಬೊಕ್ಕಸಕ್ಕೆ 1078 ಕೋಟಿ ರಾಜಧನ ಬರಬೇಕಿದೆ. ಈ ಸಂಬಂಧ ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ಹಸಿರು ನ್ಯಾಯಾಧೀಕರಣದಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಜಿಂದಾಲ್ ಕಂಪನಿಗೆ ಭೂಮಿ ಕೊಟ್ಟಿರುವ ಬಗ್ಗೆ ಬಿಜೆಪಿಯ ಹಲವು ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಕೋರ್ಟ್ ನಲ್ಲಿ ಪಿಐಎಲ್ ಇದೆ. ಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!