ಡಿವೈಡರ್ ಗೆ ಕಾರು ಡಿಕ್ಕಿ: ಇಬ್ಬರ ಸಾವು

213

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಹೊರವಲಯದ ಅಪೂರ್ವ ರೆಸಾರ್ಟ್ ಬಳಿ ನಡೆದಿದೆ. ಧಾರವಾಡದ ಜಯನಗರ ನಿವಾಸಿ ವೀಣಾ(32) ಹಾಗೂ ಬೆಳಗಾವಿಯ ಸಿಂದೋಂಗಿ ಗ್ರಾಮದ ವೈಷ್ಣವಿ ಮೃತರು ಎಂದು ತಿಳಿದು ಬಂದಿದೆ.

ಬೆಂಗಳೂರಿಗೆ ಹೋಗುತ್ತಿದ್ದಾಗ ದಾವಣಗೆರೆ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅತಿ ವೇಗವಾಗಿ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!