ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾರೊಂದು ಭೀಕರ ಅಪಘಾತಕ್ಕಿಡಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂಚೆಪಾಳ್ಯ ಗ್ರಾಮದ ಹತ್ತಿರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು ಸ್ವಿಫ್ಟ್ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.