ಪ್ರಜಾಸ್ತ್ರ ಸುದ್ದಿ
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ತರೂರ್ ಗೇಟ್ ಹತ್ತಿರ ಕಾರೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ ದುರಂತ ನಡೆದಿದೆ.
ಅವಿನಾಶ್(28) ಹಾಗೂ ಮಕ್ಕಳಾದ ಪ್ರಣಂತಿ(5), ಸೌಖ್ಯಾ(3) ಮೃತಪಟ್ಟ ದುರ್ದೈವಿಗಳು. ಲಾರಿಗೆ ಗುದ್ದಿದ ರಭಸಕ್ಕೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಳೆದ ತಡರಾತ್ರಿ ಈ ಘಟನೆ ನಡೆದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.