ಪ್ರಜಾಸ್ತ್ರ ಸುದ್ದಿ
ತುಮಕೂರು: ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ತಾಲೂಕಿನ ಕಟೇಗೆಹಳ್ಳಿ ಗೇಟ್ ಹತ್ತಿರ ನಡೆದಿದೆ. ಮೂವರು ಮಕ್ಕಳು ಪಾರಾಗಿದ್ದು, ಒಂದು ಮಗುವಿಗೆ ಗಂಭೀರ ಗಾಯಗಳಾಗಿವೆ.
ತುಮಕೂರಿನಿಂದ ಶಿರಾ ಕಡೆಗೆ ಹೊರಟಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.