ಕಾರು ಅಪಘಾತ: ಮೂವರು ಮಕ್ಕಳು ಸೇರಿ ನಾಲ್ವರ ದುರ್ಮರಣ

102

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದು ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಸುಕಿನ ಜಾವ, ಚಳ್ಳಕೆರೆ ತಾಲೂಕಿನ ಸಾಣಿಕೆರೆ ಹತ್ತಿರ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು ಅನಾಹುತ ಸಂಭವಿಸಿದೆ. ಮೂರು ತಿಂಗಳ ರಕ್ಷಾ, ಐದು ತಿಂಗಳ ಅಯ್ಯಳ್ಳಪ್ಪ, 2 ವರ್ಷದ ಸಿಂಧುಶ್ರೀ ಹಾಗೂ 26 ವರ್ಷದ ಲಿಂಗಪ್ಪ ಮೃತ ದುರ್ದೈವಿಗಳು.

ಮಲ್ಲಮ್ಮ(20), ಯಲ್ಲಮ್ಮ(30) ಹಾಗೂ ನಾಗಪ್ಪ(35) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ. ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.




Leave a Reply

Your email address will not be published. Required fields are marked *

error: Content is protected !!